ಯಾದಗಿರಿ : ಜಿಲ್ಲೆಯ ವಡಗೇರಾ ತಾಲೂಕಿನ ಹೊರಟೂರು ಗ್ರಾಮದ ಹೊಸ ಬಡಾವಣೆಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಸಾಮಾಜಿಕ ಹೋರಾಟಗಾರ ಹಣಮಂತರಾಯಗೌಡ ಮಾಲಿ ಪಾಟೀಲ್ ತೇಕರಾಳ ಆಗ್ರಹಿಸಿದ್ದಾರೆ.
ಹೊರಟೂರು ಗ್ರಾಮದ ಹೊಸ ಬಡಾವಣೆಯಲ್ಲಿ ಸುಮಾರು 30ಕ್ಕೂ ಹೆಚ್ಚು ಮನೆಗಳಿದ್ದು, ಅಲ್ಲಿನ ನಿವಾಸಿಗಳಿಗೆ ಸಮರ್ಪಕ ವಿದ್ಯುತ್ ಸಂಪರ್ಕವಿಲ್ಲ. ದೂರದ ವಿದ್ಯುತ್ ಕಂಬಗಳಿಂದ ಕಟ್ಟಿಗೆಗಳನ್ನು ನೆಟ್ಟು ಅಲ್ಲಿಂದಲೇ ಬಹಳಷ್ಟು ಜನ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದಾರೆ. ಇನ್ನು ಕೆಲವರು ಕತ್ತಲಲ್ಲಿಯೇ ಜೀವನ ನಡೆಸುತ್ತಿದ್ದಾರೆ.ಗ್ರಾಮಸ್ಥರು ಜೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದರು ಪ್ರಯೋಜನವಾಗಿಲ್ಲ ಎಂದು ಜನರು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ.
ಗ್ರಾಮದಲ್ಲಿ ವಿದ್ಯುತ್ ಇಲ್ಲದ ಕಾರಣ, ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮಾಡಲು ತೀವ್ರ ತೊಂದರೆಯಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಹೊಸ ಕಂಬ ಹಾಗೂ ಟಿಸಿ ಅಳವಡಿಸುವಂತೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ…