ಬೆಂಗಳೂರು: ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಯಶ್ ಹಾಗೂ ರಾಧಿಕಾ ಪಂಡಿತ್ ಭೇಟಿ ನೀಡಿ ಶಿವಣ್ಣನ ಆರೋಗ್ಯ ವಿಚಾರಿಸಿದ್ದಾರೆ.
ಇತ್ತಿಚೆಗೆ ಶಿವರಾಜ್ ಕುಮಾರ್ ಅವರು ಅನಾರೋಗ್ಯ ಸಮಸ್ಯೆಯಿಂದ ಅಮೆರಿಕಕ್ಕೆ ತೆರಳಿ ಚಿಕಿತ್ಸೆ ಪಡೆದು ವಾಪಾಸಾಗಿದ್ದರು. ಸಿಎಂ ಸಿದ್ದರಾಮಯ್ಯ ಅವರನ್ನು ಸೇರಿದಂತೆ ಅನೇಕ ಗಣ್ಯರು ಶಿವಣ್ಣ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಇದೀಗ ನಟ ಯಶ್ ಪತ್ನಿ ಸಮೇತ ಶಿವಣ್ಣ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.