ರಾಜ್ಯ ಕಾಂಗ್ರೆಸ್ ನಲ್ಲಿ ಸೆಪ್ಟೆಂಬರ್ ಮುಗಿದ ಬಳಿಕ ನವೆಂಬರ್ ಕ್ರಾಂತಿಯ ಮಾತುಗಳು ಶುರುವಾಗಿವೆ. ಸಿಎಂ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ ಅವರು ಮಾತುಗಳು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿವೆ..
ಸಿದ್ದರಾಮಯ್ಯ ಅವರ ನಂತರ ನಾನೇ ಕಾಂಗ್ರೆಸ್ ಅಧಿಪತಿ ಎನ್ನುತ್ತಿದ್ದ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಯತೀಂದ್ರ ಸಿದ್ದರಾಮಯ್ಯ ಶಾಕ್ ನೀಡಿದ್ದಾರೆ.. ಬೆಳಗಾವಿಯಲ್ಲಿಯತೀಂದ್ರ ಸಿದ್ದರಾಮಯ್ಯ ಆಡಿರುವ ಮಾತು ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಸಿದ್ದರಾಮಯ್ಯ ನಂತರ ಉತ್ತರಾಧಿಕಾರಿ ಯಾರು? ಎಂಬ ಪ್ರಶ್ನೆಗೆ ಯತೀಂದ್ರ ಸಿದ್ದರಾಮಯ್ಯ ಪರೋಕ್ಷ ಸುಳಿವು ಕೊಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿಯಲ್ಲಿ ನಡೆದ ಶ್ರೀ ಸಂತ ಕನಕದಾಸರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಮಾತನಾಡಿದರು.
ನಮ್ಮ ತಂದೆ ರಾಜಕೀಯದ ಕೊನೆಗಾಲದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ನಮಗೆ ಮಾರ್ಗದರ್ಶನ ಮಾಡಿ ಮುನ್ನಡೆಸುವವರು ಬೇಕು. ಜೊತೆಗೆ ವೈಚಾರಿಕವಾಗಿ ಪ್ರಗತಿಪರ ತತ್ವ ಸಿದ್ದಾಂತ ಇರುವ ನಾಯಕರು ಬೇಕು. ಸತೀಶ್ ಜಾರಕಿಹೊಳಿ ಅವರಲ್ಲಿ ಈ ಜವಾಬ್ದಾರಿ ನಿಭಾಯಿಸುವ ಗುಣಗಳಿವೆ. ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ಸತೀಶ್ ಜಾರಕಿಹೊಳಿಯವರು ಸೂಕ್ತ. ಮುಂದೆ ಬರುವ ದೊಡ್ಡ ಜವಾಬ್ದಾರಿಗಳನ್ನು ಹೊರಲು ತಯಾರಾಗಿರಿ ಎಂದು ಹೇಳಿದ್ದಾರೆ.
ಈ ಹೇಳಿಕೆ ಬೆನ್ನಲ್ಲೇ ಸತೀಶ ಜಾರಕಿಹೊಳಿಯವರೇ ಮುಂದಿನ ಮುಖ್ಯಮಂತ್ರಿ ಆಗುತ್ತಾರಾ?, ಜಾರಕಿಹೊಳಿ ಕುಟುಂಬಕ್ಕೆ ಒಲಿತಾ ಸಿಎಂ ಪಟ್ಟ ಎಂಬ ಪ್ರಶ್ನೆ ಎದುರಾಗಿವೆ.


