ರಾಜಕೀಯ

ಯತ್ನಾಳ್ ಹೊಸ ಪಕ್ಷ ಕಟ್ಟಲ್ಲ; ರಮೇಶ್ ಜಾರಕಿಹೊಳಿ ಶಾಕಿಂಗ್​ ಸ್ಟೇಟ್ಮೆಂಟ್

ಬೆಳಗಾವಿ: ಬಿಜೆಪಿಯಿಂದ ಉಚ್ಚಾಟನೆಯಾದ ಬಳಿಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ಇನ್ನು ಯತ್ನಾಳ್ ಹೊಸ ಪಕ್ಷ ಕಟ್ತಾರೆ ಎಂಬ ಸುದ್ದಿ ಸಹ ಜೋರಾಗಿತ್ತು.

ಇನ್ನು ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸ್ವತಃ ಬಸನಗೌಡ ಪಾಟೀಲ್ ಯತ್ನಾಳ್ ಅವರು, ವಿಜಯದಶಮಿಗೆ ಹೊಸ ಪಕ್ಷ ಕಟ್ಟುವುದಾಗಿ ಸೂಚನೆ ನೀಡಿದ್ರು. ಆದ್ರೀಗ ರೇಬಲ್​ ಟೀಮ್​ ಮೆಂಬರ್​ ರಮೇಶ್​ ಜಾರಕಿಹೊಳಿ ಯತ್ನಾಳ್ ಹೊಸ ಪಕ್ಷ ಕಟ್ಟಲ್ಲ, ಬಿಜೆಪಿಯಲ್ಲೇ ಮುಂದುವರೆಯುತ್ತಾರೆ ಎಂದು ಶಾಕಿಂಗ್​ ಹೇಳಿಕೆ ನೀಡಿದ್ದಾರೆ.

ಇದೇ ವಿಚಾರವಾಗಿ ಬೆಳಗಾವಿಯಲ್ಲಿ ಮಾಧ್ಗಯಮದೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಹೊಸ ಪಕ್ಷ ಸ್ಥಾಪಿಸುವ ಮಾತುಗಳು ಊಹಾಪೋಹ ಮಾತ್ರ. ಯತ್ನಾಳ ಅವರು ಬಿಜೆಪಿಯನ್ನು ಬಿಟ್ಟುಹೋಗುವುದಿಲ್ಲ, ಪಕ್ಷದಲ್ಲೇ ಮುಂದುವರೆಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಯತ್ನಾಳ ಅವರು ಬಿಜೆಪಿಗೆ ವಾಪಸ್ ಬರುತ್ತಾರೆ, ಅವರು ಬೇರೆಡೆಗೆ ಹೋಗುವುದಿಲ್ಲ” ಎಂದು ಅವರು ದೃಢವಾಗಿ ಹೇಳಿದ್ದಾರೆ

Comments (0)

Your email address will not be published. Required fields are marked *

Back to top button