
ಬೆಂಗಳೂರು: ಮುಸ್ಲಿಂ ಗುತ್ತಿಗೆದಾರರಿಗೆ ಶೇ.4 ಮೀಸಲಾತಿ ನೀಡುವ ‘ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ (ತಿದ್ದುಪಡಿ) ವಿಧೇಯಕ 2025’ಯನ್ನು ಮಂಗಳವಾರ ವಿಧಾನಸಭೆಯಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಮಂಡಿಸಿದ್ದರು.
ಇದೀಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಸ್ತುತ ತಿದ್ದುಪಡಿಗೆ ಒಪ್ಪಿಗೆ ನೀಡದಂತೆ ಪತ್ರದ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರಿಗೆ ಪತ್ರ ಬರೆದು ಒಪ್ಪಿಗೆ ನೀಡದಂತೆ ಮನವಿ ಮಾಡಿದ್ದಾರೆ. ಸದನದಲ್ಲಿ ವಿಧಯೇಕ ಮಂಡನೆಯಾಗುತ್ತಲೇ ಶಾಸಕ ಯತ್ನಾಳ್ ಪತ್ರ ಬರೆದಿದ್ದಾರೆ. ಸಂವಿಧಾನ ಬಾಹಿರವಾಗಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಶೇ.4 ರಷ್ಟು ಮೀಸಲಾತಿ ಒದಗಿಸುವ ಕೆಟಿಪಿಪಿ ಮಸೂದೆ 2025ರ ವಿವಾದಾತ್ಮಕ ತಿದ್ದುಪಡಿಗಳಿಗೆ ಒಪ್ಪಿಗೆ ನೀಡದಂತೆ ಯತ್ನಾಳ್ ಮನವಿ ಮಾಡಿದ್ದಾರೆ.




