ಜಿಲ್ಲೆ

ಯತ್ನಾಳ್ ಉಚ್ಚಾಟನೆ; ಅಭಿಮಾನಿಗಳಿಂದ ಪ್ರೊಟೆಸ್ಟ್

ಕಲಬುರಗಿ: ಶಾಸಕ ಬಸನಗೌಡ​ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದ ಬೆನ್ನಲ್ಲೆ ಯತ್ನಾಳ್ ಅಭಿಮಾನಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ.

ಈ ಹಿನ್ನಲೆ ಕಲಬುರಗಿ ಹಾಗೂ ಗದಗದಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ಬಿಜೆಪಿ ಹೈ ಕಮಾಂಡ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ಹೊರಹಾಕಿದರು.

Comments (0)

Your email address will not be published. Required fields are marked *

Back to top button