ಕಲಬುರಗಿ: ಬಿಜೆಪಿಯಿಂದ 6 ವರ್ಷ ಉಚ್ಚಾಟನೆಗೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್ ಪರವಾಗಿ ಬೆಂಬಲಿಗರು ಹಾಗೂ ಹಿಂದೂ ಸಂಘಟನೆಗಳು ಬೀದಿಗಿಳಿದಿದ್ದಾರೆ.
ಕಲಬುರ್ಗಿ ನಗರದ ಎಸ್‌ವಿಪಿ ವೃತ್ತದಲ್ಲಿ ವಿವಿಧ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಭಾವಚಿತ್ರ ಸುಟ್ಟು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ನಾವು ನಿಮ್ಮ ಜೊತೆಗೆ ಇದ್ದೇವೆ ಎಂದು ಹಿಂದೂಪರ ಸಂಘಟನೆಯ ಸದಸ್ಯರು ಘೋಷಣೆ ಕೂಗಿದರು.


