ರಾಜ್ಯ

ಯೋಗೇಶ್ ಗೌಡ ಹತ್ಯೆ ಕೇಸ್​; ಶಾಸಕ ವಿನಯ್​ ಕುಲಕರ್ಣಿ ಅರ್ಜಿ ವಜಾ

ಧಾರವಾಡ: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಬಸವರಾಜ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗಿಸಲಾಗಿದೆ. ಇದನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ನಾಲ್ಕು ವಾರಗಳಲ್ಲಿ ಟ್ರಯಲ್ ಪೂರ್ಣಗೊಳಿಸಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೂಚನೆ ನೀಡಿ, ಅರ್ಜಿ ವಜಾಗೊಳಿಸಿದರು. ಜೊತೆಗೆ ಯೋಗೇಶ್ ಗೌಡ ಪತ್ನಿ ಮಲ್ಲವ್ವ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ. ಯೋಗೀಶ್ ಗೌಡನನ್ನು ಕೊಲೆ ಮಾಡಿಸಿದ್ದೇ ಶಾಸಕ ವಿನಯ್ ಕುಲಕರ್ಣಿ ಎಂದು ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಮುತ್ತಗಿ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿದ್ದಾನೆ. ಮಾಫಿ ಸಾಕ್ಷಿಯಾದ ಬಸವರಾಜ ಮುತ್ತಗಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದನು. ಕೊಲೆ ಮಾಡಿಸಿದ್ದು ಯಾರು? ಕೊಲೆಗೆ ಪ್ಲಾನ್​ ಮಾಡಿದ್ದು ಹೇಗೆ? ಕೊಲೆಗೆ ಸುಪಾರಿ ನೀಡಿದ್ದು ಯಾರು? ಅಂತಾ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದನು.

Comments (0)

Your email address will not be published. Required fields are marked *

Back to top button