ಸಿಕ್ಸರ್ ಬಾರಿಸುತ್ತಿದ್ದಂತೆ ಮೈದಾನದಲ್ಲೇ ವ್ಯಕ್ತಿಯೊಬ್ಬ ಕುಸಿದುಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಸಂಭವಿಸಿದೆ. ಮೀರಾ ರಸ್ತೆಯ ಸಮೀಪದ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದಾಗ ಬೌಲರ್ ಎಸೆತಕ್ಕೆ ಸಿಕ್ಸರ್ ಬಾರಿಸಿದ್ದಾನೆ.
ಕೆಲವೇ ಕ್ಷಣಗಳಲ್ಲಿ ಆತ ಕುಸಿದುಬಿದ್ದು ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ. ಸಿಕ್ಸರ್ ಬಾರಿಸಿದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
A heartbreaking incident unfolds in Mira Road as a young cricketer loses his life during a game, sending shockwaves through the local community.#LokmatTimes #TurfCricket #HeatWave #CricketAccident pic.twitter.com/VP3rOChCd7
— Lokmat Times (@lokmattimeseng) June 3, 2024
ಪಿಂಕ್ ಸಮವಸ್ತ್ರ ಧರಿಸಿದ ವ್ಯಕ್ತಿ ಸಿಕ್ಸರ್ ಹೊಡೆದಿದ್ದಾನೆ. ಈ ವೇಳೆ ಅಂಪೈರ್ ಸಿಕ್ಸರ್ ಸನ್ನೆ ಮಾಡುತ್ತಿದ್ದರು. ನಂತರದ ಎಸೆತಕ್ಕೆ ಸಜ್ಜಾಗುತ್ತಿದ್ದಂತೆಯೇ ಬ್ಯಾಟ್ಸ್‌ಮನ್ ಕುಸಿದು ಬಿದ್ದಿದ್ದಾನೆ. ಕೂಡಲೇ ಸಹ ಆಟಗಾರರು ಓಡಿ ಬಂದು ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ರಕ್ಷಿಸಲು ಪ್ರಯತ್ನಿಸಿದ್ದಾರೆ.
ಆದರೆ ಅಷ್ಟರಲ್ಲಾಗಲೇ ಆತ ಸಾವನ್ನಪ್ಪಿದ್ದಾನೆಂದು ವೈದ್ಯರು ಘೋಷಿಸಿದ್ದಾರೆ. ಈ ವಿಡಿಯೋವನ್ನು ಲಕ್ಷಾಂತರ ಜನರು ಸಾವನ್ನಪ್ಪಿದ್ದಾರೆ. ಇದ್ದಕ್ಕಿದ್ದಂತೆಯೇ ಕುಸಿದುಬಿದ್ದು ಸಾವನ್ನಪ್ಪಿದ ವ್ಯಕ್ತಿಯನ್ನು ಕಂಡು ನೆಟಿಜನ್ಸ್ ಮರುಕ ವ್ಯಕ್ತಪಡಿಸಿದ್ದಾರೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com