Monday, June 23, 2025
26.6 C
Bengaluru
Google search engine
LIVE
ಮನೆರಾಜ್ಯಬೆಂಗಳೂರಿಗೆ ಬಂದಿಳಿದ ಫಾಕ್ಸ್ ಕಾನ್ ಅಧ್ಯಕ್ಷ ಸಚಿವರಾದ ಎಂ.ಬಿ.ಪಾಟೀಲ, ಪ್ರಿಯಾಂಕ್ ಖರ್ಗೆ ಅವರಿಂದ ಸ್ವಾಗತ

ಬೆಂಗಳೂರಿಗೆ ಬಂದಿಳಿದ ಫಾಕ್ಸ್ ಕಾನ್ ಅಧ್ಯಕ್ಷ ಸಚಿವರಾದ ಎಂ.ಬಿ.ಪಾಟೀಲ, ಪ್ರಿಯಾಂಕ್ ಖರ್ಗೆ ಅವರಿಂದ ಸ್ವಾಗತ

ಆಪಲ್ ಫೋನ್ ಸೇರಿದಂತೆ ಎಲೆಕ್ಟ್ರಾನಿಕ್ ಸಾಧನಗಳ ತಯಾರಿಕೆಯಲ್ಲಿ ಜಗತ್ತಿನ ಅಗ್ರಗಣ್ಯ ಕಂಪನಿಗಳಲ್ಲಿ ಒಂದಾಗಿರುವ ಫಾಕ್ಸ್ ಕಾನ್ ನ ಸಿಇಒ ಮತ್ತು ಅಧ್ಯಕ್ಷ ಯಂಗ್ ಲಿಯು ಶುಕ್ರವಾರ ಬೆಂಗಳೂರಿಗೆ ಆಗಮಿಸಿದರು.

ನವದೆಹಲಿಯಿಂದ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಸರಕಾರದ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಐಟಿಬಿಟಿ ಕಾರ್ಯದರ್ಶಿ ಏಕ್ ರೂಪ್ ಕೌರ್ ಹಾಜರಿದ್ದರು.

ಫಾಕ್ಸ್ ಕಾನ್ ಕಂಪನಿಯು ರಾಜ್ಯದಲ್ಲಿ ಭಾರೀ ಹೂಡಿಕೆ ಮಾಡುತ್ತಿದ್ದು ಈ ಸಂಬಂಧ ವಿಸ್ತೃತ ಚರ್ಚೆ ನಡೆಸಲು ಲಿಯು ಇಲ್ಲಿಗೆ ಭೇಟಿ ನೀಡಿದ್ದಾರೆ

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments