Tuesday, February 10, 2026
24.4 C
Bengaluru
Google search engine
LIVE
ಮನೆರಾಜ್ಯರೈಲಿಗೆ ತಲೆ ಕೊಟ್ಟು ಯುವತಿ ಆತ್ಮಹತ್ಯೆ; ಎರಡು ಡೆತ್​​ನೋಟ್​​​ಲ್ಲಿ ಸಾವಿನ ಸತ್ಯ ಬಯಲು

ರೈಲಿಗೆ ತಲೆ ಕೊಟ್ಟು ಯುವತಿ ಆತ್ಮಹತ್ಯೆ; ಎರಡು ಡೆತ್​​ನೋಟ್​​​ಲ್ಲಿ ಸಾವಿನ ಸತ್ಯ ಬಯಲು

ಧಾರವಾಡ: ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದ ಕ್ಯಾರಕೊಪ್ಪ ರೈಲ್ವೆ ಗೇಟ್​ ಬಳಿ ನಡೆದಿದ್ದು, ಯುವತಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತವಾದ ಹಿನ್ನೆಲೆ ಆಕೆಯ ಪ್ಯಾಂಟ್​​ ಕಿಸೆಯಲ್ಲಿ ಡೆತ್​ನೋಟ್​ ಪತ್ತೆಯಾಗಿದೆ.. 24 ವರ್ಷದ ಪಲ್ಲವಿ ಮೃತ ಯುವತಿ. ಈಕೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಗಾಗಿ ಧಾರವಾಡಕ್ಕೆ ಬಂದಿದ್ದಳು ಎಂದು ತಿಳಿದು ಬಂದಿದೆ. ಮೃತ ಪಲ್ಲವಿಯ ಪ್ಯಾಂಟ್​ ಜೇಬಿನಲ್ಲಿ ಸಿಕ್ಕ ಎರಡು ಡೆತ್​​​​ನೋಟ್​​​​​​​ಲ್ಲಿ ತಂದೆ ತಾಯಿ ಬಗ್ಗೆ ಆಕೆ ಅಸಮಾಧಾನ ವ್ಯಕ್ತಪಡಿಸಿದ್ದಾಳೆ.

ನನಗೆ ಯಾವತ್ತೂ ನೀವು ಪ್ರೀತಿ ನೀಡಿಲ್ಲ. ಹಾಸ್ಟೆಲ್​​ನಲ್ಲೇ ನನ್ನ ಬೆಳೆಸಿದ್ದೀರಿ. ನನ್ನ ಬೇಕು ಮತ್ತು ಬೇಡಗಳನ್ನು ನೀವು ಕೇಳದ ಕಾರಣ ನಾನು ನೋವುಂಡಿದ್ದೇನೆ ಎಂದು ಬರೆದಿರೋದು ಕಂಡುಬಂದಿದೆ. ಮತ್ತೊಂದು ಡೆತ್​​ನೋಟ್​​ ಆಕೆಯ ರೂಮಿನಲ್ಲಿ ಸಿಕ್ಕಿದ್ದು, ಅದರಲ್ಲಿ ಪ್ರೀತಿಸುತ್ತಿದ್ದ ಯುವಕನ ಬಳಿ ಪಲ್ಲವಿ ಕ್ಷಮೆ ಕೇಳಿದ್ದಾಳೆ. ನಮ್ಮವರು ನಿನ್ನೊಡನೆ ಬದುಕಲು ಅವಕಾಶ ಕೊಡಲಿಲ್ಲ. ಇದರಿಂದಾಗಿ ನನ್ನ ಮನಸ್ಸಿಗೆ ನೋವಾಗಿದೆ. ನನ್ನನ್ನು ನೀನು ಕ್ಷಮಿಸು, ಈ ನನ್ನ ಸಾವಿಗೆ ನಾನೇ ಕಾರಣ ಎಂದು ಪಲ್ಲವಿ ಸ್ಪಷ್ಟವಾಗಿ ತಿಳಿಸಿದ್ದಾಳೆ.

ಇನ್ನು ಎರಡನೇ ಡೆತ್​​ನೋಟ್ ಅಲ್ಲಿ ​​ಮೃತ ಪಲ್ಲವಿ ಮತ್ತು ಬಳ್ಳಾರಿ ತಾಲೂಕಿನ ದಮ್ಮೂರು ಕಗ್ಗಲ್ಲು ಗ್ರಾಮದ ನಿವಾಸಿ ಯುವಕ ಪ್ರೀತಿಸುತ್ತಿದ್ದರು. ಈ ವಿಷಯವನ್ನು ಪಲ್ಲವಿ ಮನೆಯಲ್ಲೂ ಇವರು ಪ್ರಸ್ತಾಪಿಸಿದ್ದು, ಆ ವೇಳೆ ಕುಟುಂಬ ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ, ತಾಯಿಯ ಸಂಬಂಧಿಕರೊಬ್ಬರ ಜೊತೆ ಪಲ್ಲವಿಯ ಮದುವೆ ನಿಶ್ಚಯ ಕೂಡ ಮಾಡಲಾಗಿತ್ತು. ಹೀಗಾಗಿ ಆಕೆ ಬಹಳ ನೊಂದಿದ್ದಳು ಎಂಬ ವಿಷಯ ಕೂಡ ತನಿಖೆ ವೇಳೆ ಗೊತ್ತಾಗಿದೆ.

ಇನ್ನು ಘಟನೆ ಸಂಬಂಧ ಹುಬ್ಬಳ್ಳಿಯಲ್ಲಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿದ್ದಾರೆ. ವೈಯಕ್ತಿಕ ಕಾರಣಕ್ಕಾಗಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ನೇಮಕಾತಿ ಪ್ರಕ್ರಿಯೆ ಆಗದಿರೋದಕ್ಕೆ ಪಲ್ಲವಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅಪಪ್ರಚಾರ ಮಾಡಲಾಗ್ತಿದೆ. ಪಲ್ಲವಿ ಸಾವಿಗೂ ಉದ್ಯೋಗ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ. ಆಕೆಯ ಜೇಬಿನಲ್ಲಿ ಎರಡು ಡೆತ್​ನೋಟ್​ಗಳು ಪತ್ತೆಯಾಗಿವೆ. ವೈಯಕ್ತಿಕ ವಿಚಾರಕ್ಕೆ ಆತ್ಮಹತ್ಯೆ ಎಂದು ಅದರಲ್ಲಿ ಉಲ್ಲೇಖಿಸಿರುವ ಕಾರಣ, ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯುವತಿ ಆತ್ಮಹತ್ಯೆಗೆ ಬೇರೆ ಬಣ್ಣ ಕಟ್ಟುವ ಕೆಲಸ ಮಾಡಬಾರದು ಎಂದಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments