Tuesday, February 10, 2026
24.4 C
Bengaluru
Google search engine
LIVE
ಮನೆ#Exclusive NewsTop Newsಬೆಂಗಳೂರಿನಲ್ಲಿ ಮರದ ಬೃಹತ್​​​​ ಕೊಂಬೆ ಬಿದ್ದು ಯುವತಿ ಸಾವು

ಬೆಂಗಳೂರಿನಲ್ಲಿ ಮರದ ಬೃಹತ್​​​​ ಕೊಂಬೆ ಬಿದ್ದು ಯುವತಿ ಸಾವು

ಬೆಂಗಳೂರು: ಸ್ಕೂಟರ್​​ ನಲ್ಲಿ ತೆರಳುತ್ತಿದ್ದಾಗ ಬೃಹತ್​​​​ ಮರದ ಕೊಂಬೆ ಬಿದ್ದು, ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ..

24 ವರ್ಷದ ಕೀರ್ತನಾ ಮೃತಪಟ್ಟ ಯುವತಿ. ಅದೇ ದಾರಿಯಲ್ಲಿ ಮತ್ತೊಂದು ಬೈಕ್​ ನಲ್ಲಿ ಹೋಗುತ್ತಿದ್ದ ಬೈಕ್​ ಸವಾರ ಸವಾರ ಭಾಸ್ಕರ್​​​​​ ಎಂಬಾತ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಪಡೆಯುತ್ತಿದ್ದಾನೆ.. ಕ್ರಿಕೆಟ್ ಮ್ಯಾಚ್ ನೋಡಿಕೊಂಡು ವಾಪಸ್ ಬರ್ತಿದ್ದ ವೇಳೆ ಎರಡು ಬೈಕ್ ಮೇಲೆ ಮರದ ಕೊಂಬೆ ಬಿದ್ದಿದೆ. ಈ ವೇಳೆ ಕೀರ್ತನಾ ಸ್ಥಳದಲ್ಲೇ ಮೃತಪಟ್ಟರೇ ಆಕೆಯ ಸ್ನೇಹಿತೆ ಮತ್ತು ಮತ್ತೊಂದು ಬೈಕ್‌ನಲ್ಲಿದ್ದ ಭಾಸ್ಕರ್ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೆಬ್ಬಾಳ ಮೂಲದ ಯುವತಿ ಕೀರ್ತನಾ ಮತ್ತು ಆಕೆಯ ಸ್ನೇಹಿತೆ ಇಲ್ಲಿನ ಆಚಾರ್ಯ ಕಾಲೇಜಿನಲ್ಲಿ ನಡೆಯುತ್ತಿದ್ದ ಸ್ಯಾಂಡಲ್ ವುಡ್ ಕ್ರಿಕೆಟ್ ಪ್ರೀಮಿಯರ್‌ ಲೀಗ್ ನೋಡೋಕೆ ಹೋಗಿದ್ದ ಅವಘಡ ಸಂಭವಿಸಿದೆ.. ಸ್ಥಳಕ್ಕೆ ಸೋಲದೇವನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮೃತ ಯುವತಿಯ ಶವವನ್ನು ಸಪ್ತಗಿರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments