ಗದಗ: ಮನೆಯಲ್ಲಿ ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೋಮಡಿರುವ ಘಟನೆ ಗದಗ ನಗರದ ಭೀಷ್ಮ ಕೆರೆಯಲ್ಲಿ ನಡೆದಿದೆ..
21 ವರ್ಷದ ಚಂದ್ರಿಕಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಚಂದ್ರಿಕಾ ಗದಗ ನಗರದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಫೈನಲ್ ಇಯರ್ ವ್ಯಾಸಂಗ ಮಾಡುತ್ತಿದ್ದಳು. ಮೂಲತಃ ಬಾಗಲಕೋಟೆ ಜಿಲ್ಲೆಯ ಶಿರೂರು ಗ್ರಾಮದ ನಿವಾಸಿ ಚಂದ್ರಿಕಾ . ನಗರದ ಸಂಭಾಪೂರ ರಸ್ತೆಯ ಲಕ್ಷ್ಮೀ ನಗರದಲ್ಲಿ ಬಾಡಿಗೆ ಮನೆಯಲ್ಲಿ ಗೆಳತಿಯರೊಂದಿಗೆ ವಾಸವಿದ್ದಳು. ಫ್ರೆಂಡ್ಸ್ ಜೊತೆ ಟೂರ್ ಹೋಗಿದ್ದಳು.
ಈ ವಿಷಯ ಮನೆಯವರಿಗೆ ಗೊತ್ತಾಗಿದೆ. ಓದುವುದು, ಕಾಲೇಜು ಬಿಟ್ಟು ಮನೆಯಲ್ಲಿ ಹೇಳದೆ ಯಾಕೆ ಟೂರ್ ಹೋಗಿದ್ದಿಯಾ ಅಂತ ಬೈದು ಬುದ್ಧಿವಾದ ಹೇಳಿದ್ದಾರೆ. ಇದರಿಂದ ಮನನೊಂದ ಚಂದ್ರಿಕಾ ಶನಿವಾರ ರಾತ್ರಿ ಕೊಠಡಿಯಿಂದ ಹೊರಹೋಗಿ ಭೀಷ್ಮ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ. ಇಂದು ಶವವಾಗಿ ಪತ್ತೆಯಾಗಿದೆ. ಸ್ಥಳಕ್ಕೆ ಗದಗ ಶಹರ ಪೊಲೀಸ್ ಠಾಣೆ ಸಿಪಿಐ ಎಲ್.ಕೆ ಜೂಲಕಟ್ಟಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಪೋಷಕರ ಆಕ್ರಂದನ ಮುಗಿಳು ಮುಟ್ಟಿದೆ.


