ಕ್ರೈಂ ಸ್ಟೋರಿ

ಬೆಂಗಳೂರಿನ ಸ್ಯಾಂಕಿ ಕೆರೆಗೆ ಹಾರಿ ಯುವತಿ ಆತ್ಮಹತ್ಯೆ!

A young woman committed suicide by jumping into Sankey Lake in Bengaluru!

ಬೆಂಗಳೂರು : 20 ವರ್ಷದ ಯುವತಿಯೊಬ್ಬಳು ಸ್ಯಾಂಕಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸದಾಶಿವನಗರದಲ್ಲಿ ನಡೆದಿದೆ. ಮೃತ ಯುವತಿಯನ್ನು ಚಿಕ್ಕಬಾಣವರ ಮೂಲದ ತೇಜು (20) ಎಂದು ಗುರುತಿಸಲಾಗಿದೆ. ಈಕೆ ವಿದ್ಯಾರ್ಥಿನಿಯಾಗಿದ್ದು, ತನ್ನ ಸ್ನೇಹಿತನಿಗೆ ಸಂದೇಶ ಕಳುಹಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ನಿನ್ನೆ ಸ್ಯಾಂಕಿ ಕೆರೆ ಬಳಿ ಬಂದಿದ್ದ ತೇಜು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನಾ ಸ್ಥಳಕ್ಕೆ ಧಾವಿಸಿದ ಸದಾಶಿವನಗರ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿ ಮೃತದೇಹವನ್ನು ಕೆರೆಯಿಂದ ಹೊರ ತೆಗೆದಿದ್ದಾರೆ. ನಂತರ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಆತ್ಮಹತ್ಯೆಗೂ ಮುನ್ನ ಆಕೆ ʻನನಗೆ ಜೀವನ ಸಾಕಾಗಿದೆʼ ಅಂತ ಗೆಳೆಯನಿಗೆ ಮೆಸೇಜ್‌ ಮಾಡಿದ್ದಾಳೆ. ಬಳಿಕ ಫೋನ್‌ ಸ್ವಿಚ್‌ಆಫ್‌ ಮಾಡಿಕೊಂಡಿದ್ದಾಳೆ. 

ಈ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಯುವತಿ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಆಕೆಯ ಸ್ನೇಹಿತನಿಗೆ ಕಳುಹಿಸಿದ ಸಂದೇಶ ಮತ್ತು ಇತರೆ ಆಯಾಮಗಳನ್ನು ಇಟ್ಟುಕೊಂಡು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button