ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರನ್ನು ಪೊಲೀಸರು ಶುಕ್ರವಾರ ಬೆಳಗಾವಿ ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಿದರು. ರವಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ, ಜಾಮೀನು ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು.
ಕೋರ್ಟ್ನಲ್ಲಿ ಜಡ್ಜ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಟಿ ರವಿ, ಗುರುವಾರ ಮಧ್ಯಾಹ್ನ ವಿಧಾನಸಭಾ ಕಾರಿಡಾರ್ನಲ್ಲಿ, ‘‘ನಿನ್ನ ಹೆಣ ಚಿಕ್ಕಮಗಳೂರಿಗೆ ಹೋಗುತ್ತೆ’’ ಎಂದು ಮಂತ್ರಿ ಧಮಕಿ ಹಾಕಿದ್ದರು. ರಾತ್ರಿ ನನ್ನನ್ನು ಪೊಲಿಸರು ಎಲ್ಲೆಲ್ಲೋ ಕರೆದೊಯ್ಯತ್ತಿದ್ದರು. ದೇವರ ಮೇಲೆ ಭಾರ ಹಾಕಿ ನಾನು ಹೋದೆ. ‘‘ನಿಮ್ಮನ್ನ ನೋಡಿಕೊಳ್ಳುತ್ತೇವೆ’’ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಡಿಕೆ ಶಿವಕುಮಾರ್ ಕೌನ್ಸಿಲ್ ಹಾಲ್ ಒಳಗೆ ಹೇಳಿದ್ದರು ಎಂದು ಸಿಟಿ ರವಿ ಆರೋಪಿಸಿದರು.