Top Newsಜಿಲ್ಲೆಸುದ್ದಿ

ಯೂಟ್ಯೂಬರ್‌ ಅಭಿಷೇಕ್‌ ವಿಚಾರಣೆ; ಎಸ್‌ಐಟಿ ಮುಂದೆ ತಪ್ಪೊಪ್ಪಿಗೆ

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ ರಹಸ್ಯ ಹಾಗೂ ಅನನ್ಯಾ ಭಟ್ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಯೂಟ್ಯೂಬರ್ ಅಭಿಷೇಕ್‌ನನ್ನು ತೀವ್ರ ವಿಚಾರಣೆ ನಡೆಸಿದ್ದಾರೆ.

ನಿನ್ನೆ ತಡರಾತ್ರಿವರೆಗೂ ಅಭಿಷೇಕ್ ಗ್ರಿಲ್ ಮಾಡಿರೋ ಎಸ್‌ಐಟಿ ಅಧಿಕಾರಿಗಳು ಬುರುಡೆ ಪ್ರಕರಣದ ಕುರಿತು ಯೂಟ್ಯೂಬರ್ ಅಭಿಷೇಕ್ ಬಳಿ ಮಾಹಿತಿ ಪಡೆದುಕೊಂಡಿದ್ದಾರೆ. ತನ್ನ ವಿಡಿಯೋಗಳಲ್ಲಿ ಸುಳ್ಳು ಮಾಹಿತಿ ಪ್ರಸಾರ ಮಾಡಿದ್ದ ಆರೋಪ ಹಿನ್ನೆಲೆಯಲ್ಲಿ ಅಭಿಷೇಕ್ ವಿಚಾರಣೆ ನಡೆಸಲಾಗಿದೆ.

6 ತಿಂಗಳ ಹಿಂದೆ ಗಿರೀಶ್ ಮಟ್ಟಣ್ಣವರ್ ಸಂಪರ್ಕ ಮಾಡಿದ್ದ. ಈ ಬಗ್ಗೆ ವಿಚಾರಣೆ ವೆಳೆ ಅಭಿಷೇಕ್ ಬಾಯ್ಬಿಟ್ಟಿದ್ದು ಲೈಕ್ಸ್ ಹಾಗೂ ವ್ಯೂವ್ಸ್‌ಗಾಗಿ ವಿಡಿಯೋ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಎಸ್‌ಐಟಿ ಅಧಿಕಾರಿಗಳ ಮುಂದೆ ಕಣ್ಣೀರು ಹಾಕಿದ್ದಾನೆ.

Comments (0)

Your email address will not be published. Required fields are marked *

Back to top button